Saturday, June 28, 2025
spot_imgspot_img
spot_imgspot_img

ಸೈಬರ್ ವಂಚಕರಿಗೆ ಸಿಮ್‌ಕಾರ್ಡ್‌ ಪೂರೈಸುತ್ತಿದ್ದ ಆರೋಪಿ ‌ಬಂಧನ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಸೈಬರ್ ವಂಚಕರಿಗೆ ಸಿಮ್ ಪೂರೈಸುತ್ತಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಕೇರಳದ ಮಲಪ್ಪುರಂ ಪೊಲೀಸರು ಬಂಧಿಸಿದ್ದು, ಆತನಿಂದ 40 ಸಾವಿರ ಸಿಮ್ ಕಾರ್ಡ್ ಮತ್ತು 180 ಮೊಬೈಲ್ ಗಳನ್ನು ವಶಕ್ಕೆ ಪಡೆದ ಘಟನೆ ಕೊಡಗಿನ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅಬ್ದುಲ್ ರೋಷನ್ (46) ಬಂಧಿತ ವ್ಯಕ್ತಿ.

ಮಲ್ಲಪುರಂ ಜಿಲ್ಲೆಯ ವ್ಯಕ್ತಿಯೊಬ್ಬರು 1.8 ಕೋಟಿ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಈ ಕೇಸಿನ ಬೆನ್ನತ್ತಿದ ಕೇರಳದ ಪೊಲೀಸರಿಗೆ ವಂಚಕರು ಉಪಯೋಗಿಸುತ್ತಿದ್ದ ಸಿಮ್‌ ಕಾರ್ಡ್‌ಗಳ ಬಗ್ಗೆ ಮಾಹಿತಿ ಸಿಕ್ಕಿದೆ. ಆ ಪ್ರಕಾರ ಮಲಪ್ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅಬ್ದುಲ್ ರೋಷನ್‌ನನ್ನು ಮಡಿಕೇರಿಯಿಂದ ಬಂಧಿಸಿದ್ದಾರೆ. ಈತ ಬೇರೆ ಬೇರೆ ಟೆಲಿಫೋನ್ ಕಂಪನಿಗಳ ಹೆಸರಲ್ಲಿ ನಕಲಿ ಸಿಮ್‌ ಕಾರ್ಡ್‌ಗಳನ್ನು ಮಾಡಿಸಿ ಸೈಬ‌ರ್ ವಂಚಕರಿಗೆ ಪೂರೈಸುತ್ತಿದ್ದ ಎನ್ನಲಾಗಿದೆ. ಆತನ ಬಳಿ ಇದ್ದ ಸಾವಿರಾರು ಸಿಮ್‌ ಕಾರ್ಡ್‌ಗಳು, ನೂರಾರು ಮೊಬೈಲ್ ಫೋನ್‌ಗಳು ಹಾಗೂ ಆರು ಬಯೋಮೆಟ್ರಿಕ್ ಸ್ಕ್ಯಾನರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!