Friday, May 3, 2024
spot_imgspot_img
spot_imgspot_img

ಪ್ರೀತಿ ನಿರಾಕರಿಸಿದ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನ ಬಂಧನ..!

- Advertisement -G L Acharya panikkar
- Advertisement -

ಪ್ರೀತಿ ನಿರಾಕರಿಸಿದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬಂಧನಕ್ಕೊಳಗಾದ ಆರೋಪಿ ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ.

ಆರೋಪಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಖಾನಾಪುರದ ಕಾಲೇಜಿನ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದಿದ್ದಾಗ ಆಕೆಯ ಫೋಟೋವನ್ನು ನಗ್ನ ಚಿತ್ರದ ಜೊತೆ ಸೇರಿಸಿ
ಡೀಪ್ ಫೇಕ್ ಆಪ್ ಮಾದರಿಯ ಮತ್ತೊಂದು ಆಪ್‍ನಲ್ಲಿ ಫೋಟೋ ಎಡಿಟ್ ಮಾಡಿ ಕಿರುಕುಳ ಕೊಡುತಿದ್ದ. ಇಷ್ಟಕ್ಕೆ ಸುಮ್ಮನಾಗದೆ ಆಕೆಯ ಮೂವರು ಸ್ನೇಹಿತೆಯರ ಫೋಟೋ ಬಳಸಿ ಇದೇ ರೀತಿ ಬ್ಲಾಕ್‍ಮೇಲ್ ಮಾಡಿತಿದ್ದ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಅಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ಬಗ್ಗೆ ಯುವತಿ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!