Sunday, June 29, 2025
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಓರ್ವ ಸಾವು..!

- Advertisement -
- Advertisement -

ಚಾಲಕನ ನಿಯಂತ್ರಣ ತಪ್ಪಿ ಆಟೋ ಉರುಳಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಗೂ‌ರ್ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಕೋಡ್ಲಿ ಗ್ರಾಮದ ನಿವಾಸಿ ಅರ್ಜುನ್ ಭೀಮಶಾ (67) ಎಂದು ಗುರುತಿಸಲಾಗಿದೆ.

ಸುಗೂರ್ ಗ್ರಾಮದಿಂದ ಕಾಳಗಿ ಪಟ್ಟಣಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಅಟೋ ಉರುಳಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಕಾಳಗಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!