Saturday, May 11, 2024
spot_imgspot_img
spot_imgspot_img

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ; ಓರ್ವ ಮೃತ್ಯು

- Advertisement -G L Acharya panikkar
- Advertisement -

ಪುತ್ತೂರು : ಅಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಆಳ ಭಾಗದ ತೋಟಕ್ಕೆ ಉರುಳಿ ಬಿದ್ದು ಓರ್ವ ಮೃತಪಟ್ಟ ಘಟನೆ ಪುತ್ತೂರು- ಸಂಟ್ಯಾರು- ಪಾಣಾಜೆ ರಸ್ತೆಯಲ್ಲಿನ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಳಕ್ಕ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ ಅಬ್ದುಲ್ ರಹಿಮಾನ್ (65) ಮೃತಪಟ್ಟವರು.

ಉಮ್ಮರ್ ಫಾರೂಕ್ ಎಂಬವರು ಶನಿವಾರ ರಾತ್ರಿ ಪುತ್ತೂರಿನಿಂದ ಪಾಣಾಜೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಅಟೋ ರಿಕ್ಷಾವು ಬಳಕ್ಕ ಎಂಬಲ್ಲಿನ ತಿರುವು ರಸ್ತೆ ಭಾಗದಲ್ಲಿ ಚಾಲಕನ ಹತೋಟಿ ಕಳಕೊಂಡು ರಸ್ತೆ ಬದಿ ಆಳಭಾಗ ದಲ್ಲಿರುವ ತೋಟಕ್ಕೆ ಉರುಳಿ ಬಿದ್ದಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ಅಬ್ದುಲ್ ರಹಿಮಾನ್ ಅವರ ಅಳಿಯ ಅಟೋ ಚಾಲಕ ಉಮ್ಮರ್ ಫಾರೂಕ್, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ರಹಿಮಾನ್ ಅವರ ಪುತ್ರಿ ಆಯಿಷತ್ತುಲ್ ತಾಹಿರಾ ಮತ್ತು ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರಿಂದ ಘಟನಾ ಸ್ಥಳಕ್ಕೆ ಭೇಟಿ, ಪರಿಶೀಲನೆ
ರಾತ್ರಿ ಅಟೋ ರಿಕ್ಷಾ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಬಳಕ್ಕ ಎಂಬಲ್ಲಿನ ಘಟನಾ ಸ್ಥಳಕ್ಕೆ ಶಾಸಕ ಅಶೋಕ್‌ ಕುಮಾರ್ ರೈ ಅವರು ಭಾನುವಾರ ಭೇಟಿ ನೀಡಿ ಅಪಾಯಕಾರಿ ಸ್ಥಳ ಪರಿಶೀಲನೆ ನಡೆಸಿದರು.
ಸಂಟ್ಯಾರಿನಿಂದ ಮುಂದೆ ಬಳಕ್ಕ ಸೇತುವೆಯ ಸಮೀಪ ರಾಜ್ಯ ಹೆದ್ದಾರಿ ರಸ್ತೆಯಲ್ಲಿನ ತಾಂತ್ರಿಕ ದೋಷಗಳಿಂದಾಗಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಸಹಿತ ರಸ್ತೆ ಅಘಘಾತದಿಂದಾಗಿ 6 ಮಂದಿ ಜೀವ ಕಳಕೊಂಡಿದ್ದಾರೆ.ಈ ಅಪಾಯಕಾರಿ ರಸ್ತೆ ಸಮಸ್ಯೆಗೆ ಮುಕ್ತಿ ನೀಡುವಂತೆ ಕಳೆದ ಎರಡು ವರ್ಷಗಳಿಂದ ಸಾರ್ವಜನಿಕರು ನಿರಂತರವಾಗಿ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. 6 ಮಂದಿ ಪ್ರಾಣ ಕಳಕೊಂಡಿದ್ದರೂ ಇನ್ನೂ ಅಧಿಕಾರಿಗಳು ಸ್ಪಂದಿಸುವ ಕೆಲಸ ಮಾಡಿಲ್ಲ ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

- Advertisement -

Related news

error: Content is protected !!