Sunday, June 29, 2025
spot_imgspot_img
spot_imgspot_img

ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್; ಕೇರಳ ಮೂಲದ ಇಬ್ಬರು ಮೃತ್ಯು

- Advertisement -
- Advertisement -

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಎಸ್‌.ಎಸ್. ಆಸ್ಪತ್ರೆಯ ರೈಲ್ವೆ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತುಲ್ (25) ಹಾಗೂ ಹೃಷಿಕೇಷ್ (24) ಮೃತ ದುರ್ದೈವಿಗಳು.ಗೋವಾದಿಂದ ಟ್ರಿಪ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಈ ಅಪಘಾತ ನಡೆದಿದೆ.

ನಿಯಂತ್ರಣ ತಪ್ಪಿದ ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರರು ಸೇತುವೆ ಮೇಲಿನಿಂದ ರೈಲ್ವೆಯ ಹಳಿಯ ಪಕ್ಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆಯ ಬದಿಯಲ್ಲಿ ಬಿದ್ದಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!