Saturday, June 28, 2025
spot_imgspot_img
spot_imgspot_img

ಬಂಟ್ವಾಳ : ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್‌ ಕಳವು

- Advertisement -
- Advertisement -

ಬಂಟ್ವಾಳ : ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ.

ಅಮ್ಮೂರು ಗ್ರಾಮದ ಕರಿಂಗಾನ ನಿವಾಸಿ ಅಬ್ದುಲ್ ಮನಾಫ್ ಅವರಿಗೆ ಸೇರಿದ ಬಜಾಜ್ ಪಲ್ಸರ್ ಬೈಕ್ ಕಳವಾಗಿದ್ದು, ಇವರು ಜೂನ್ 10 ರಂದು ರಾತ್ರಿ ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದರು ಎನ್ನಲಾಗಿದೆ. ಜೂನ್ 11 ರಂದು ಬೆಳಿಗ್ಗೆ ಬಂದು ನೋಡುವಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ಬೈಕಿನ ಅಂದಾಜು ಮೌಲ್ಯ 50 ಸಾವಿರ ರೂಪಾಯಿ ಆಗಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 70/2024, ಕಲಂ: 379 ಐ ಪಿ ಸಿ ರಂತೆ ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!