Sunday, June 7, 2026
spot_imgspot_img
spot_imgspot_img

ಬಿ. ಸಿ.ರೋಡ್: ಬೈಕ್ ಸಹ ಸವಾರನ ಮೇಲೆ ಹರಿದ ಲಾರಿ ಸ್ಥಳದಲ್ಲೇ ಮೃತ್ಯು!

- Advertisement -
- Advertisement -

ಬಿ. ಸಿ.ರೋಡ್ : ಬೈಕ್ ಸ್ಕಿಡ್ ಆಗಿ ಸಹ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ.

ಮೃತನನ್ನು ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.

ಬೈಕ್ ಸ್ಕಿಡ್ ಆಗಿ ಸಹ ಸವಾರ ಡಾಮರು ರಸ್ತೆಗೆ ಬಿದ್ದಿದ್ದು ಆತನ ಮೇಲೆ ಲಾರಿ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೋಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ. ಸರ್ಕಲ್ ನಲ್ಲಿ ಘಟನೆ ಬಳಿಕ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು

ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ಬಂದವರು ಎಂದು ಹೇಳಲಾಗಿದೆ. ಬಂಟ್ವಾಳ ಸಂಚಾರಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!