Saturday, June 6, 2026
spot_imgspot_img
spot_imgspot_img

ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಮೃತ್ಯು..!

- Advertisement -
- Advertisement -

ಬೈಕ್ ಸವಾರನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಮರಗೋಳ ಕ್ರಾಸ್ ಹತ್ತಿರದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಆಳಂದ ತಾಲೂಕಿನ ಎನೇನಾವುದಿ ಗ್ರಾಮದ ಗಣೇಶ ಗುಂಡಪ್ಪ (27) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಚಿತ್ತಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿಗಳಾದ ಸವಿಕುಮಾರ್, ಮತಿವಂತ, ಹುಸೇನ್ ಪಾಶಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!