Thursday, June 18, 2026
spot_imgspot_img
spot_imgspot_img

ಬೆಳ್ತಂಗಡಿ: ನಾಪತ್ತೆಯಾಗಿದ್ದ ಸರಕಾರಿ ಅಧಿಕಾರಿಯ ಶವ ನದಿಯಲ್ಲಿ ಪತ್ತೆ

- Advertisement -
- Advertisement -

ಬೆಳ್ತಂಗಡಿ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೋರ್ವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಇದೀಗ ಅಧಿಕಾರಿ ಶವವು ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯಲ್ಲಿ ಸಿಗುವ ಪಟ್ರಮೆ ನದಿಯಲ್ಲಿ ಪತ್ತೆಯಾಗಿದೆ.

ಅಮ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ, ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಮೃತ ಅಧಿಕಾರಿ.

ಮಾ.27 ರಂದು ಬುಧವಾರ ಕಚೇರಿಯಿಂದ ಮಧ್ಯಾಹ್ನದ ನಂತರ ತೆರಳಿದವರು ಫೋನ್ ಸ್ವಿಚ್ ಆಪ್ ಆಗಿದ್ದುಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ.ತಂಡದಲ್ಲಿ ಲಕ್ಷ್ಮೀನಾರಾಯಣ ಕರ್ತವ್ಯ ನಿರ್ವಹಿಸಿತ್ತಿದ್ದು, ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ತಂಡದವರು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಮಾ.31 ರಂದು ನಾಪತ್ತೆಯಾಗಿ ನಾಲ್ಕು ದಿನಗಳ ಬಳಿಕ ಅವರ ಶವವು ಪಟ್ರಮೆ ನದಿಯಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ಮರುದಿನ ಪಟ್ರಮೆ ಸೇತುವೆ ಬಳಿ ಅವರ ಬೈಕ್ ದೊರಕಿದ್ದು, ಬೈಕ್ ದೊರೆತ ಬಳಿಕ ಹೊಳೆಯಲ್ಲಿ ಹುಡುಕಾಟ ನಡೆಸಿದ್ದು, ಲಕ್ಷ್ಮೀನಾರಾಯಣ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಸಂಶಯಿಸಲಾಗಿದೆ.
ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಶವವನ್ನು ಮೇಲೆತ್ತಿ ದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!