- Advertisement -
- Advertisement -



ಮಂಗಳೂರು: ಪುತ್ತೂರು ಮೂಲದ ವ್ಯಕ್ತಿಯೋರ್ವರ ಮೃತದೇಹ ಮಂಗಳೂರು ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಅವರ ಬಳಿ ಇದ್ದ ಆಧಾರ್ ಕಾರ್ಡ್ ನಿಂದಮೃತ ವ್ಯಕ್ತಿ ಶಾಜು (52) ಎಂದು ಗುರುತಿಸಲಾಗಿದೆ.
ಸದ್ಯ ವಾರಿಸುದಾರರ ಮಾಹಿತಿ ಲಭ್ಯವಾಗದ ಹಿನ್ನೆಲೆ ಮೃತದೇಹವನ್ನು ವೆನ್ಸಾಕ್ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








