- Advertisement -
- Advertisement -




ಡೆಹ್ರಾಡೂನ್: ಬಸ್‌ವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ.
ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 20 ಮಂದಿ ಸಾವನ್ನಪ್ಪಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ಅಧಿಕರು ಮಕ್ಕಳಾಗಿದ್ದಾರೆಂದು ವರದಿಗಳು ತಿಳಿಸಿವೆ.
ಸದ್ಯ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -