Monday, June 8, 2026
spot_imgspot_img
spot_imgspot_img

ಸೇತುವೆಯಿಂದ ಕೆಳಗೆ ಬಿದ್ದ ಬಸ್‌; 5 ಮಂದಿ ಸಾವು, 40ಕ್ಕೂ ಅಧಿಕ ಮಂದಿ ಗಾಯ..!

- Advertisement -
- Advertisement -

ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು , 40ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿ ನಡೆದಿದೆ.

40 ಮಂದಿ ಪ್ರಯಾಣಿಕರಿದ್ದ ಬಸ್ ಪುರಿಯಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿ-16ರ ಬಾರಾಬತಿ ಸೇತುವೆ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಜಾಜ್‌ಪುರದ ಪೊಲೀಸ್ ಅಧೀಕ್ಷಕರು, ವೈದ್ಯರ ತಂಡ ಮತ್ತು ಇತರ ಜಿಲ್ಲಾಡಳಿತ ಅಧಿಕಾರಿಗಳು ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಕಟರ್ ಬಳಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸಂತಾಪ ಸೂಚಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

- Advertisement -

Related news

error: Content is protected !!