Wednesday, May 22, 2024
spot_imgspot_img
spot_imgspot_img

ನಿಯಂತ್ರಣ ತಪ್ಪಿ 300 ಅಡಿ ಆಳವಾದ ಕಂದಕಕ್ಕೆ ಬಿದ್ದ ಬಸ್; 30 ಪ್ರಯಾಣಿಕರು ಸಾವು..!

- Advertisement -G L Acharya panikkar
- Advertisement -

ಬಸ್ ನಿಯಂತ್ರಣ ತಪ್ಪಿ ಬಟಾಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿ ಟ್ರಿಂಗಲ್-ಅಸ್ಸಾರ್ ಬಳಿ 300 ಅಡಿ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಶ್ರೀನಗರದ ಜಮ್ಮು, ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.

ಕಂದಕಕ್ಕೆ ಬಸ್ ಉರುಳಿ ಬಿದ್ದಿದ್ದು 30 ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತಿದ್ದರು ಎನ್ನಲಾಗಿದೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಸ್ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಬಸ್ ಅಪಘಾತದಲ್ಲಿ ಜೀವಹಾನಿಯಿಂದ ಘಟನೆಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ.

- Advertisement -

Related news

error: Content is protected !!