Monday, June 15, 2026
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!

- Advertisement -
- Advertisement -

ಶಿವಮೊಗ್ಗ: ಸಾಗರದಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾದ ಘಟನೆ ಶಿವಮೊಗ್ಗ, ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಸಂಭವಿಸಿದೆ.

ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಸಾಗರದಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಬಸ್ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳನ್ನು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಅವಘಡವು ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!