- Advertisement -
- Advertisement -






ಬೀದರ್: ವೇಗವಾಗಿ ಚಲಿಸುತ್ತಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಶಿವಕುಮಾರ್ ಪೊಲೀಸ್ ಪಾಟೀಲ್ (47 ) ಎಂದು ಗುರುತಿಸಲಾಗಿದೆ.
ಮೂಲತಃ ಔರಾದ್ ತಾಲೂಕಿನ ಧೂಪತ್ ಮಹಾಗಾಂವ್ ಗ್ರಾಮದವರಾದ ವ್ಯಕ್ತಿ ಸಂತಪೂರ್ ಕಡೆಯಿಂದ ಸ್ವ ಗ್ರಾಮಕ್ಕೆ ತೆರಳುತ್ತಿದ್ದಾಗ ಕಾರು ಪಲ್ಟಿಯಾಗಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -