Wednesday, May 15, 2024
spot_imgspot_img
spot_imgspot_img

ಉಡುಪಿ: ವಾಶ್ ರೂಂನಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರೀಕರಣ ಪ್ರಕರಣ; ಸ್ಪಷ್ಟನೆ ನೀಡಿದ ಉಡುಪಿ ಎಸ್ಪಿ

- Advertisement -G L Acharya panikkar
- Advertisement -

ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ವಾಶ್ ರೂಂನಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಹಾಕೆ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಕರಣದ ಕುರಿತಂತೆ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು ಕಾಲೇಜಿನಲ್ಲಿ ಹಿಡನ್ ಕ್ಯಾಮೆರಾ ಅಥವಾ ಅಂತಹ ಯಾವುದೇ ಸಾಧನ ಬಳಸಿರುವ ಯಾವುದೇ ಕುರುಹು ಕಂಡುಬಂದಿಲ್ಲ. ಇಂತಹ ಫೋಟೊ, ವೀಡಿಯೋಗಳನ್ನು ಸೆರೆಹಿಡಿದು ಬ್ಲಾಕ್‌ಮೇಲ್ ಗೆ ಬಳಸಿಕೊಳ್ಳುತ್ತಿದ್ದಾರೆ ಎಂಬ ವದಂತಿಗಳನ್ನೂ ಹಬ್ಬಿಸಲಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ಎಫ್ಐಆರ್ ಅಥವಾ ಯಾವುದೇ ದೂರು ದಾಖಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು. ಘಟನೆಗೆ ಸಂಬಂಧಪಟ್ಟಂತೆ ಕಾಲೇಜು ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ. ಇದನ್ನು ಮೋಜಿಗಾಗಿ ಮಾಡಲಾಗಿದ್ದು ನಂತರ ವೀಡಿಯೊಗಳನ್ನು ಅಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಕಾಲೇಜು ಆಡಳಿತದೊಂದಿಗೆ ಹೇಳಿದ್ದಾರೆ.

- Advertisement -

Related news

error: Content is protected !!