Sunday, October 6, 2024
spot_imgspot_img
spot_imgspot_img

ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸಂಭವಿಸಿದೆ.

ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು.

ತಮ್ಮ ಮನೆಯ ಸಮೀಪದ ಕಾಡಿನಲ್ಲಿ ಇವರಿಬ್ಬರೂ ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದುವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ.

ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆಯಾಗಿದ್ದು, ಅವರ ಮೊದಲ ಪತ್ನಿ ಹತ್ತು ವರ್ಷದ ಹಿಂದೆ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯನ್ನು ವಿವಾಹವಾಗಿದ್ದರು. ಮೊದಲನೆ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.
ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!