- Advertisement -
- Advertisement -
ಕಡಬ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತ ದೇಹ ಇಂದು ಪಂಜ ಹೊಳೆಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಮೃತ ಯುವಕನನ್ನು ಕಡಬ ತಾಲೂಕು ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33 ವ)ಎಂದು ಗುರುತಿಸಲಾಗಿದೆ.
ನಾಪತ್ತೆ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಪಂಜ ಹೊಳೆಯ ಪಲ್ಲೋಡಿ ಅಡ್ಕದಲ್ಲಿ ಮೃತ ದೇಹವನ್ನು ಮುಳುಗು ತಜ್ಞರು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ
- Advertisement -