Wednesday, July 2, 2025
spot_imgspot_img
spot_imgspot_img

ಸುಬ್ರಹ್ಮಣ್ಯ: ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಶಂಕೆ

- Advertisement -
- Advertisement -

ಸುಬ್ರಹ್ಮಣ್ಯ: ಕೋತಿಗಳ ಮೃತದೇಹ ಪತ್ತೆಯಾಗಿದ್ದು, ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿ ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಕಂಡುಬಂದಿದೆ.

ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.

- Advertisement -

Related news

error: Content is protected !!