Sunday, April 28, 2024
spot_imgspot_img
spot_imgspot_img

ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಶ್ರೇಯಸ್ ಸಾವು, ವರ್ಷದಲ್ಲಿ ಇದು ನಾಲ್ಕನೇ ಘಟನೆ

- Advertisement -G L Acharya panikkar
- Advertisement -

ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ, ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.

ರಾಯಭಾರ ಕಚೇರಿಯು ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದೆ. ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನಿಗೇರಿ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ‘X’ ನಲ್ಲಿ ಬರೆದಿದ್ದಾರೆ.

ಬೆನ್ನಿಗೇರಿಯ ಸಾವಿಗೆ ಕಾರಣ ತಿಳಿದಿಲ್ಲ ಆದರೆ ಒಂದು ವರ್ಷದಲ್ಲಿ ನಡೆದ ನಾಲ್ಕನೇ ಸಾವು ಇದಾಗಿದ್ದು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಕಳವಳಗೊಳಿಸಿದೆ.

- Advertisement -

Related news

error: Content is protected !!