Thursday, June 18, 2026
spot_imgspot_img
spot_imgspot_img

ವಯನಾಡ್‌ನಲ್ಲಿ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 256ಕ್ಕೆ ಏರಿಕೆ..!

- Advertisement -
- Advertisement -

ವಯನಾಡ್: ಪ್ರಕೃತಿ ವಿಕೋಪಕ್ಕೆ ಬಲಿಯಾಗಿರುವ ವಯನಾಡ್‌ನಲ್ಲಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 256ಕ್ಕೆ ಏರಿದೆ. 227 ಮಂದಿ ನಾಪತ್ತೆಯಾಗಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಪರಿಹಾರ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ಇದುವರೆಗೆ ಪರಿಹಾರ ತಂಡಗಳು 1592 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಕಟಿಸಿದ್ದಾರೆ. ಘಟನೆಯಲ್ಲಿ ಬದುಕಿ ಉಳಿದಿರಬಹುದಾದ ವ್ಯಕ್ತಿಗಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಭೂಸೇನೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ನಿರಂತರ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಮರ ಹಾಗೂ ಕಾಂಕ್ರಿಟ್ ಅವಶೇಷಗಳಡಿ ಬದುಕಿ ಉಳಿದವರಿಗಾಗಿ ಶೋಧ ಮುಂದುವರಿಸಿದ್ದಾರೆ.

- Advertisement -

Related news

error: Content is protected !!