- Advertisement -
- Advertisement -



ಉಡುಪಿ: ಚಾಲಕನೋರ್ವ ಮೂರ್ಛೆಹೋದ ಪರಿಣಾಮ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಘಟನೆ ಉಡುಪಿಯ ಕೆಳಪರ್ಕಳದ ಬಳಿ ನಡೆದಿದೆ.
ಪರ್ಕಳದಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಬಸ್ ಕೆಳಪರ್ಕಳದ ಬಳಿ ಚಾಲಕನಿಗೆ ಹಠಾತ್ ಫಿಟ್ಸ್ ಬಂದಿದ್ದು ಕೂಡಲೇ ಅವರು ಸ್ಟೇರಿಂಗ್ ಬಿಟ್ಟಿದ್ದಾರೆ. ಈ ವೇಳೆ ಬಸ್ ಹಿಮ್ಮುಖವಾಗಿ ಚಲಿಸಿದೆ. ಕೂಡಲೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಹಾರಲು ಯತ್ನಿಸಿದ್ದಾರೆ. ಬಸ್ ಕಂದಕಕ್ಕೆ ನುಗ್ಗಿ, ಅಲ್ಲೇ ನಿಂತಿದೆ. ಸ್ವಲ್ಪ ಹಿಂದಕ್ಕೆ ತೆರಳುತ್ತಿದ್ದರೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯುವ ಸಾಧ್ಯತೆಯಿತ್ತು. ಬಸ್ಸಿನಲ್ಲಿ 30-40 ಮಂದಿ ಪ್ರಯಾಣಿಕರು ಇದ್ದರು. ಚಾಲಕನನ್ನು ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.
ಪ್ರಯಾಣಿಕರು ಮತ್ತೊಂದು ಬಸ್ಸಿನಲ್ಲಿ ತೆರಳಿದ್ದಾರೆ. ಬಸ್ಸಿನ ಹಿಂಭಾಗ ಜಖಂಗೊಂಡಿದೆ.
- Advertisement -