- Advertisement -
- Advertisement -





ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ಏಕಾಏಕಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ಬಣಕಲ್ ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ಚಾಲಕ ಆಟೋ ಚಾಲಕ ಮಲೆಮನೆ ರವಿ (28) ಎಂದು ಗುರುತಿಸಲಾಗಿದೆ.
ನಿಯಂತ್ರಣ ತಪ್ಪಿ ಏಕಾಏಕಿ ಆಟೋ ಪಲ್ಟಿಯಾಗಿದೆ. ಪರಿಣಾಮ ಚಾಲಕ ರವಿ ಗಂಭೀರ ಗಾಯಗೊಂಡಿದ್ದ. ಕೂಡಲೇ ಆತನನ್ನು ಮೂಡಿಗೆರೆ ಅಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯದಲ್ಲಿ ಚಾಲಕ ಮೃತಪಟ್ಟಿದ್ದಾನೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಣಕಲ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
- Advertisement -








