Friday, June 5, 2026
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ಮೂವರು ಮೃತ್ಯು

- Advertisement -
- Advertisement -

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಭಾನುವಾರ ಮುಂಜಾನೆ ನಡೆದಿದೆ.

ವೀರಾಪುರ ಗ್ರಾಮದ ನಿವಾಸಿಗಳಾದ ಯಮುನಾ, ದೊಡ್ಡಣ್ಣ ಮತ್ತು ಸಣ್ಣಮ್ಮ ಮೃತಪಟ್ಟವರು. ಪ್ರವೀಣ್ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರವೀಣ್ ಅವರು ಪತ್ನಿ ಯಮುನಾ, ಮಾವ ದೊಡ್ಡಣ್ಣ ಮತ್ತು ಅತ್ತೆ ಸಣ್ಣಮ್ಮ ಜೊತೆ ಇಂದು ಭಾನುವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಕ್ಷೇತ್ರಕ್ಕೆ ಕಾರಿನಲ್ಲಿ ಹೊರಟಿದ್ದರು. ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!