Monday, August 10, 2026
spot_imgspot_img
spot_imgspot_img

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು : ಓರ್ವನಿಗೆ ಗಾಯ

- Advertisement -
- Advertisement -

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಓರ್ವ ಗಾಯಗೊಂಡ ಘಟನೆ ಗೋಲ್ತಮಜಲು ಗ್ರಾಮದ ಜಮ್ಮು ಕ್ರಾಸ್ ಎಂಬಲ್ಲಿ ನಡೆದಿದೆ.

ಗಾಯಾಳು ಪ್ರಯಾಣಿಕನನ್ನು ಫಾಝಿಲ್ ಎಂದು ಹೆಸರಿಸಲಾಗಿದೆ.

ಮುಹಮ್ಮದ್ ಫಾರೂಕ್ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಹಾಗೂ ಇನ್ನುಳಿದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗಾಯಾಳು ಪ್ರಯಾಣಿಕನನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗೋಳ್ತಮಜಲು ನಿವಾಸಿ ಮಹಮ್ಮದ್ ಇಕ್ಯಾಲ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!