Wednesday, April 23, 2025
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ನಾಲ್ವರಿಗೆ ಗಂಭೀರ ಗಾಯ..!

- Advertisement -
- Advertisement -

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಕುಟುಂಬವೊಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಗಾಯಾಳುಗಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!