Monday, April 29, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಉರುಳಿದ ಕಾರು; ಇಬ್ಬರು ಮೃತ್ಯು, ಓರ್ವ ಗಂಭೀರ..!

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಮೇಲೆಯೇ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ಗಂಭೀರವಾಗಿ ಗಾಯಾಗೊಂಡ ಘಟನೆ ಮಂಡ್ಯದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ಬೆಂ-ಮೈ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಶಂಕರ್‌, ಮಹದೇವು ಹಾಗೂ ಗಂಭೀರ ಗಾಯಗೊಂಡವರನ್ನು ಕಿಶೋರ್‌ ಎಂದು ಗುರುತಿಸಲಾಗಿದೆ.

ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೂವರು ಕೆಲಸ ಮುಗಿಸಿ ಮೈಸೂರಿನಿಂದ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಮೇಲೆಯೇ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ, ಬಳಿಕ ಕ್ಯಾಮೆರಾ ಕಂಬಕ್ಕೂ ಡಿಕ್ಕಿ ಹೊಡೆದು, ಡಿವೈಡರ್‌ ಪಕ್ಕದ ರಸ್ತೆಗೆ ಮಗುಚಿಕೊಂಡಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಶಂಕರ್‌ ಹಾಗೂ ಮಹದೇವು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ಕಿಶೋರ್‌ನನ್ನು ಮಂಡ್ಯದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಮದ್ದೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!