Saturday, June 6, 2026
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ: ತಪ್ಪಿದ ಭಾರೀ ಅನಾಹುತ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿಯಾದ ಘಟನೆ ಬೆಂಗಳೂರು ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮಂಗಳೂರಿನಿಂದ ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್‌ ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೆದ್ದಾರಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟ್ಯಾಂಕರ್ ಮಗುಚಿ ಬೀಳುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಸೋರಿಕೆಯಾಗಿದೆ.

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಕ್ರೇನ್‌ ಬಳಸಿ ಟ್ಯಾಂಕರ್ ಅನ್ನು ಮೇಲೆತ್ತಲಾಗಿದೆ. ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದ ಕಾರಣ ಹಲವು ಸಮಯದರೆಗೆ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಸಂಭವಿಸಿತ್ತು.

- Advertisement -

Related news

error: Content is protected !!