Wednesday, May 15, 2024
spot_imgspot_img
spot_imgspot_img

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; 15ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯ

- Advertisement -G L Acharya panikkar
- Advertisement -
vtv vitla

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಂದಾಪುರದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಚಾಲಕನ ನಿರ್ಲಕ್ಷ್ಯತನದ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಠವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಎಸ್.ಐ ಹರೀಶ್ ಆರ್ ನಾಯ್ಕ್ ಹಾಗೂ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು.

- Advertisement -

Related news

error: Content is protected !!