Tuesday, May 7, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಓರ್ವ ಸಾವು ಮತ್ತೋರ್ವ ಗಂಭೀರ..!

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಫೈರೋಜ್ (36) ಎಂದು ಗುರುತಿಸಲಾಗಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಟಾಟಾ ಸುಮೋ ತೆರಳುತ್ತಿತ್ತು. ನಿಡಘಟ್ಟ ಬಳಿ ತೆರಳುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಮೃತ ಫೈರೋಜ್​ನ ಸಹೋದರ ಅಪ್ರೋಜ್​ಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಅಪ್ರೋಜ್​ಗೆ ಮಂಡ್ಯ ಮಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!