Monday, July 1, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!

- Advertisement -G L Acharya panikkar
- Advertisement -

ಮಂಡ್ಯ: ಸರ್ಕಾರಿ ಬಸ್​ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ತಿಳಿದು ಬಂದಿದೆ. ಬಸ್​ ಅಪಘಾತ ಕಂಡು ಸ್ಥಳೀಯ ನಿವಾಸಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನ ರಕ್ಷಣೆ ಮಾಡಿದ್ದಾರೆ. ಮಾತ್ರವಲ್ಲದೆ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.

ಬಸ್​ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭಿಸಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಕೆಲವು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!