Sunday, May 5, 2024
spot_imgspot_img
spot_imgspot_img

ಸತ್ತಿದ್ದಾನೆಂದು ಹೆಣಗಳ ರಾಶಿಯಲ್ಲಿ ಇಟ್ಟಿದ್ದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ..!!

- Advertisement -G L Acharya panikkar
- Advertisement -
vtv vitla

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟಿದ್ದಾನೆಂದು ನೂರಾರು ಶವಗಳ ರಾಶಿಯಲ್ಲಿ ಇಟ್ಟಿದ್ದ ತನ್ನ ಮಗನನ್ನು ಜೀವಂತವಾಗಿ ಗುರುತಿಸಿ ತಂದೆ ಹೊರ ತೆಗೆಸಿರುವ ಅಚ್ಚರಿಯ ಘಟನೆ ನಡೆದಿದೆ.

ಹೆಲರಾಮ್‌ ಮಲಿಕ್‌ ಅವರು ತನ್ನ ಪುತ್ರ ಬಿಸ್ವಜಿತ್‌ ಬದುಕಿದ್ದಾನೆ ಎಂಬುದನ್ನು ಗುರುತಿಸಿ ನಿಟ್ಟುಸಿರು ಬಿಟ್ಟಿದ್ದಾರೆ. ನಂತರ ಮಗನನ್ನು ವಾಪಸ್‌ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ರೈಲು ದುರಂತದಲ್ಲಿ ನಿಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದರು. ಈ ಮಾತನ್ನು ಒಪ್ಪಲು ನಿರಾಕರಿಸಿದ ತಂದೆ ತನ್ನ ಮಗನಿಗಾಗಿ ಕೋಲ್ಕತ್ತಾದಿಂದ ಬಾಲಾಸೋರ್‌ಗೆ 230 ಕಿಮೀ ಪ್ರಯಾಣ ಮಾಡಿದ್ದರು.

ಶವಗಾರದಲ್ಲಿ ಶವಗಳ ಮಧ್ಯೆ ಇರಿಸಿದ್ದ ಮಗನನ್ನು ಗುರುತಿಸಿ ಆತ ಬದುಕಿರುವುದನ್ನು ಖಚಿತ ಪಡಿಸಿಕೊಂಡರು. ನಂತರ ಒಡಿಶಾದಿಂದ ಮನೆಗೆ ಕರೆತಂದ ನಂತರ, ಮಗನನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಯ ಟ್ರಾಮಾ ಕೇರ್ ಘಟಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಗಂಭೀರ ಗಾಯಗಳ ಹೊರತಾಗಿಯೂ, ಬಿಸ್ವಜಿತ್‌ ಆರೋಗ್ಯ ಸ್ಥಿರವಾಗಿದೆ.

ಒಡಿಶಾದ ಬಾಲಾಸೋರ್‌ ಬಳಿ ಪ್ರಯಾಣಿಕರಿದ್ದ ಎರಡು ರೈಲು ಹಾಗೂ ಸರಕುಗಳಿದ್ದ ಒಂದು ರೈಲು ಅಪಘಾತಕ್ಕೀಡಾಗಿದ್ದವು. ಈ ಭೀಕರ ದುರಂತದಲ್ಲಿ ಸುಮಾರು 275 ಮಂದಿ ದುರ್ಮರಣಕ್ಕೀಡಾಗಿದ್ದಾರೆ. 1,100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಚ್ಚಿಬೀಳಿಸುವಂತಹ ದುರಂತಕ್ಕೆ ವಿಶ್ವಾದ್ಯಂತ ವಿಷಾದ ವ್ಯಕ್ತವಾಗಿತ್ತು. ಅಪಘಾತವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.

- Advertisement -

Related news

error: Content is protected !!