Saturday, July 25, 2026
spot_imgspot_img
spot_imgspot_img

ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ : ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಸಾವು

- Advertisement -
- Advertisement -

ಶಿವಮೊಗ್ಗ : ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ನಡೆದಿದೆ.

ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ.

ಕಳೆದ ಕೆಲವು ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದ ನಾಗರಾಜ್. ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು
ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲವೆಂದು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಾಗರ ತಾಲೂಕಿನ ತಾಳಗುಪ್ಪ ಹೊಂಕೇರಿಯವರಾದ ನಾಗರಾಜ್ ರವರು ಡೆಂಗ್ಯೂ ತೀವ್ರತರ ಜ್ವರದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!