Sunday, June 14, 2026
spot_imgspot_img
spot_imgspot_img

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ

- Advertisement -
- Advertisement -

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಫೆ.17 ಶನಿವಾರ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಇಮಿಗ್ರೇಷನ್ ಆಗಮನ ಪ್ರದೇಶದ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45,44,600 ರೂ.ಮೌಲ್ಯದ 733 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ವಾಶ್‌ರೂಮ್ ಒಂದರ ಡ್ರೈನೇಜ್ ಚೇಂಬರ್‌ನಲ್ಲಿ ಇರಿಸಲಾಗಿದ್ದ ಕಪ್ಪು ಬಣ್ಣದ ಪೌಚ್‌ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಪತ್ತೆಯಾಗಿದೆ.ಇದನ್ನು ವಾಶ್ ರೂಂನಲ್ಲಿ ಇಟ್ಟಿರುವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕಸ್ಟಮ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!