Tuesday, May 21, 2024
spot_imgspot_img
spot_imgspot_img

ದಕ್ಷಿಣ ಕನ್ನಡದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಕೈತಪ್ಪಿದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ.

ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.

ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್‌ ಕುಮಾರ್ ‌ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

- Advertisement -

Related news

error: Content is protected !!