Saturday, June 6, 2026
spot_imgspot_img
spot_imgspot_img

ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ..!

- Advertisement -
- Advertisement -

ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆಗೈದ ಘಟನೆ ವಿಜಯಪುರ ತಿಕೋಟ ತಾಲೂಕಿನ ಹುಬನೂರು ತಾಂಡಾ -2 ರಲ್ಲಿ ಘಟನೆ ನಡೆದಿದೆ.

ಹತ್ಯೆಯಾದ ಮಹಿಳೆ ರೇಶ್ಮಾ ರಾಠೋಡ್ (25) ಆರೋಪಿ ಪತಿ ಅಶೋಕ್ ರಾಠೋಡ್ (33) ಎಂದು ಗುರುತಿಸಲಾಗಿದೆ.

ಪತ್ನಿಯ ಶೀಲ ಶಂಕಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.ಆರೋಪಿ ಕುಡಿದು ಬಂದು ಮನೆಯಲ್ಲಿ ಪತ್ನಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ. ಇದರಿಂದ ಬೇಸತ್ತು ಮಹಿಳೆ ತನ್ನ ತವರು ಮನೆಗೆ ಹೋಗಿದ್ದಳು. ಇದರಿಂದ ಸಿಟ್ಟಿಗೆದ್ದ ಆರೋಪಿ ಮಹಿಳೆಯ ಮೇಲೆ ಸಲಾಕೆಯಿಂದ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. 11 ವರ್ಷಗಳ ಹಿಂದೆ ಇವರಿಬ್ಬರ ಮದುವೆಯಾಗಿತ್ತು.

- Advertisement -

Related news

error: Content is protected !!