Sunday, June 7, 2026
spot_imgspot_img
spot_imgspot_img

ಪತ್ನಿಯನ್ನು ಕೊಲೆಗೈದು ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತಾಕಿದ ಪತಿರಾಯ..!!

- Advertisement -
- Advertisement -

ಪತ್ನಿಯ ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತಾಕಿದ ಅಮಾನವೀಯ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪತಿಯೇ ಪತ್ನಿಯನ್ನುಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ರೇಖಾ ಕೊಲೆಯಾದ ಮೃತ ದುರ್ದೈವಿ. ಆರೋಪಿ ಪತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಈ ಘಟನೆ ಯಲಹಂಕ ಉಪನಗರ 3ನೇ ಹಂತದಲ್ಲಿ ನಡೆದಿದೆ. ವರದಕ್ಷಿಣೆ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ.

ಸಂತೋಷ್ ಪತ್ನಿ ರೇಖಾಳನ್ನು ಕೊಲೆ ಮಾಡಿದ ಬಳಿಕ ಸೀರೆಯಿಂದ ಫ್ಯಾನಿಗೆ ನೇಣು ಹಾಕಿ, ಆತ್ಮಹತ್ಯೆ ಅಂತಾ ಬಿಂಬಿಸಿದ್ದ. ಸದ್ಯ ಪತಿ ಸಂತೋಷ್ ನನ್ನು ಯಲಹಂಕ ನ್ಯೂ ಟೌನ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!