Sunday, June 7, 2026
spot_imgspot_img
spot_imgspot_img

ಸ್ವಾತಂತ್ರ್ಯೋತ್ಸವದ ಸಡಗರ; ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಡಗರ ಮನೆ ಮಾಡಿದೆ. ದೇಶದೆಲ್ಲೆಡೆ ಭಾರತೀಯರು ದೇಶಪ್ರೇಮ ಮರೆದಿದ್ದಾರೆ. ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.

ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.

ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.

- Advertisement -

Related news

error: Content is protected !!