Sunday, June 14, 2026
spot_imgspot_img
spot_imgspot_img

ಬೆಳ್ಳಂಬೆಳಗ್ಗೆ ಶಾಕ್‌ ನೀಡಿದ ಐಟಿ ಅಧಿಕಾರಿಗಳು; ಕರಾವಳಿ ಭಾಗದ ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ ದಾಳಿ..!!

- Advertisement -
- Advertisement -
vtv vitla

ಮಂಗಳೂರು/ಉಡುಪಿ: ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿತ್ತು. ಇದರ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡೆ, ಮಂಗಳೂರು ನಗರದ ಶಿವಭಾಗ್, ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನ ಆಭರಣ ಜ್ಯುವೆಲ್ಲರಿ ಅಂಗಡಿಯಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಆಭರಣ ಜ್ಯುವೆಲ್ಲರಿ ಕರ್ನಾಟಕದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಮಳಿಗೆಗಳನ್ನು ಹೊಂದಿದೆ. ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನೀರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!