Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಜೀಪು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ

- Advertisement -
- Advertisement -

ಬಂಟ್ವಾಳ: ಜೀಪೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆ ಠಾಣೆಯ ಸಮೀಪವಿರುವ ನಂದಗೋಕುಲ ಮುಂಭಾಗದಲ್ಲಿ ನಡೆದಿದೆ.

ಗಾಯಗೊಂಡ ಸ್ಕೂಟರ್ ಸವಾರನನ್ನು ಸೋಣಂದೂರು ನಿವಾಸಿ ಮಹಮ್ಮದ್ ಅರ್ಫಾಸ್ ನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಜೀಪ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ.
ರಸ್ತೆಯಲ್ಲಿ ನಿಲ್ಲಿಸಲಾಗಿರುವ ಜೀಪನ್ನು ಚಾಲಕ ವಸಂತ ಶೆಟ್ಟಿ ಎಂಬವರು ಅಜಾಗರೂಕತೆಯಿಂದ ಒಮ್ಮೆಲೆ ಬಂಟ್ವಾಳ ಕಡೆಗೆ ತಿರುಗಿಸಿದಾಗ ಬಿಸಿರೋಡಿನ ಕಡೆಯಿಂದ ಬರುತ್ತಿದ್ದ ಸ್ಕೂಟರ್ ಸವಾರ ಅರ್ಫಾಸ್ ಅವರಿಗೆ ಡಿಕ್ಕಿಯಾಗಿದೆ. ಕೂಡಲೇ ಸ್ಥಳೀಯರು ಗಾಯಗೊಂಡ ಅರ್ಫಾಸ್ ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಕಾರಣಕ್ಕಾಗಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಎಸ್.ಐ.ಉದಯರವಿ‌ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!