- Advertisement -
- Advertisement -
ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ.
ಕುಂತೂರು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70ವ.) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಮನೆ ಸಮೀಪದ ಹಲಸಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡಿದ್ದರು. ಇದನ್ನು ಗಮನಿಸಿದ್ದ ಅವರ ಪುತ್ರರು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಅಣ್ಣಿ ಗೌಡ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಅಣ್ಣಿ ಗೌಡ ಅವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟದಿಂದ ಬೇಸತ್ತು, ಮಾನಸಿಕವಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಪುತ್ರ ಗಣೇಶ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -