Sunday, June 29, 2025
spot_imgspot_img
spot_imgspot_img

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧನವಾಗಿದ್ದ ವ್ಯಕ್ತಿ ಕಸ್ಟಡಿಯಲ್ಲೇ ಆತ್ಮಹತ್ಯೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಇತ್ತೀಚೆಗೆ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್​ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಅನುಜ್ ಥಾಪನ್ (32) ಎಂದು ಗುರುತಿಸಲಾಗಿದೆ. ಅನುಜ್​ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದ ಸುಭಾಷ್ ಚಂದರ್ ಮತ್ತು ಅನುಜ್ ಥಾಪಸ್ ಎಂಬ ಇಬ್ಬರನ್ನೂ ಪಂಜಾಬ್ ನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಮಾರ್ಚ್ 15ರಂದು ಆರೋಪಿಗಳಿಗೆ ಇವರು ಪಿಸ್ತೂಲ್ ಮತ್ತು ಕಾಟ್ರಿಜ್ ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದರು. ಈ ಇಬ್ಬರು ವ್ಯಕ್ತಿಗಳಲ್ಲಿ ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

- Advertisement -

Related news

error: Content is protected !!