- Advertisement -
- Advertisement -


ಬೆಂಗಳೂರು: ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗಂಗಮ್ಮ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ವೈಮ್ಯಾಕ್ಸ್ ಸರ್ಕಲ್ ಬಳಿ ನಡೆದಿದೆ.
ಕೊಲೆಯಾದ ಯುವಕನನ್ನು ಮಂಜುನಾಥ್ (17) ಎಂದು ಗುರುತಿಸಲಾಗಿದೆ.
ತಡರಾತ್ರಿ ವೈಮ್ಯಾಕ್ಸ್ ವೃತ್ತದ ಬಳಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗಂಗಮ್ಮ ಗುಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಭೀಕರ ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -








