Saturday, April 27, 2024
spot_imgspot_img
spot_imgspot_img

ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದ ಬಸ್‌ ನಿಲ್ದಾಣದಲ್ಲಿ ಪತ್ತೆ..!!

- Advertisement -G L Acharya panikkar
- Advertisement -

ತುಮಕೂರು: ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಹಾಸನದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಪಟ್ಟನಾಯಕನಹಳ್ಳಿ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಜುಳಾ (13), ಮಧು ಕುಮಾರ್ (13), ಮಹಾಲಕ್ಷ್ಮಿ (15) ಹಾಗೂ ಭಾನು (14) ನಾಪತ್ತೆಯಾದ ಮಕ್ಕಳು ಎಂದು ಗುರುತಿಸಲಾಗಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ಒಂದೇ ಮನೆಯ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದರು. ಈ ಬಗ್ಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು.ಈ ಬಗ್ಗೆ ಪಟ್ಟನಾಯಕಹಳ್ಳಿ ಡಿವೈಎಸ್​ಪಿ ನವೀನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನಾಗಿ ರಚನೆ ಮಾಡಿ ಪೊಲೀಸರು ಮಕ್ಕಳ ಪತ್ತೆಕಾರ್ಯ ಆರಂಭಿಸಿದ್ದರು.

ತುಮಕೂರು, ಚಿಕ್ಕಮಗಳೂರು, ಬೆಂಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಮಕ್ಕಳು ಮಾತ್ರ ಎಲ್ಲೂ ಪತ್ತೆಯಾಗಿರಲಿಲ್ಲ. ಇದೀಗ ಹಾಸನದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಾಲ್ವರು ಮಕ್ಕಳು ಪತ್ತೆಯಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬಾಲಕಿ ರಮೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ತಮ್ಮಿಬ್ಬರ ಪ್ರೀತಿಗೆ ಸಹಾಯ ಮಾಡಿದಕ್ಕೆ ಮೂವರು ಮಕ್ಕಳನ್ನು ಬಾಲಕಿ ತಮ್ಮ ಜತೆಯಲ್ಲೇ ಬೆಂಗಳೂರಿಗೆ ಕರೆದೊಯ್ದಿದ್ದಾಳೆ. ಬಳಿಕ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದ್ದರು. ಇದೀಗ ಪೊಲೀಸರ ಸತತ ಪ್ರಯತ್ನದಿಂದ ನಾಲ್ವರು ಮಕ್ಕಳನ್ನು ಪೊಲೀಸರು ಪತ್ತೆ ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ.

- Advertisement -

Related news

error: Content is protected !!