



ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 10 ನೇ ಆವೃತ್ತಿ ಆರಂಭಗೊಂಡಿದೆ. ಕಲರ್ಸ್ ಕನ್ನಡ ವಾಹಿನಿ ಜೊತೆಗೆ ಜಿಯೋ ಸಿನಿಮಾ ಒಟಿಟಿಯಲ್ಲಿ ರಿಯಾಲಿಟಿ ಶೋ ಪ್ರಸಾರವಾಗುತ್ತಿದೆ. ಇದೀಗ ಬಿಗ್‌ಬಾಸ್‌ಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸಪ್ರೈಸ್ ಎಂಟ್ರಿ ಕೊಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿ ಮಾಡಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಈಗಾಗಲೇ ಬಿಗ್‌ಬಾಸ್ ಮನೆ ಸೇರಿಕೊಂಡಿದ್ದಾರೆ. ಪ್ರದೀಪ್ ಈಶ್ವರ್ ಅವರನ್ನು ನೋಡುತ್ತಿದ್ದಂತೆಯೇ ಬಿಗ್ ಬಾಸ್ ಸ್ಪರ್ಧಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶಾಸಕರ ಜೊತೆಗೆ ಸ್ಪರ್ಧೆ ಮಾಡಬೇಕು ಅಂತಾನೂ ಮಾತನಾಡಿಕೊಳ್ಳುತ್ತಿದ್ದಾರೆ.
ಪ್ರದೀಪ್ ಈಶ್ವರ್ ಸದ್ಯ ಅತಿಥಿಯಾಗಿ ಬಿಗ್‌ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ ಎನ್ನುತ್ತಿವೆ. ಆದರೆ ಪ್ರದೀಪ್ ಈಶ್ವರ್ ಬಿಗ್‌ಬಾಸ್ ಸೀಸನ್ ೧೦ರಲ್ಲಿ ಕಾಣಿಸಿಕೊಂಡಿರುವುದು ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಆದರೆ ಪ್ರದೀಪ್ ಈಶ್ವರ್ ಎಷ್ಟು ದಿನಗಳ ಕಾಲ ಬಿಗ್‌ಬಾಸ್ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ ಅನ್ನೋದು ಸದ್ಯದ ಕುತೂಹಲ.