- Advertisement -
- Advertisement -
ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
11 ತಿಂಗಳ ಮಗು ಹಾಗೂ 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿದ್ದಾರೆ. ಒಂದು ವರ್ಷದ ಹಿಂದೆ ಪತಿ ನವೀನ್ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈಗ 11 ತಿಂಗಳ ಮಗುವಿಗೂ ಶ್ವಾಸಕೋಶದ ಸಂಬಂಧಿ ಕಾಯಿಲೆ ಇದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ವಾಸಿಯಾಗಿರಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ವಿಜಯಲಕ್ಷ್ಮಿ ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -