Wednesday, June 17, 2026
spot_imgspot_img
spot_imgspot_img

ಆಸ್ತಿ ವಿಚಾರಕ್ಕೆ ಗಲಾಟೆ; ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಕೊಲೆ..!

- Advertisement -
- Advertisement -

ಆಸ್ತಿ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಹತ್ಯೆ ಮಾಡಿರುವಂತಹ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ಭದ್ರೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆ ಭದ್ರೇಗೌಡನ ದೊಡ್ಡಿ ಗ್ರಾಮದ ಗೌರಮ್ಮ (55) ಎಂದು ಗುರುತಿಸಲಾಗಿದೆ.

ಗೌರಮ್ಮ ಜಮೀನಿನ ಪಕ್ಕದಲ್ಲಿಯೇ ಸಂಬಂಧಿಯೊಬ್ಬರು ವ್ಯವಸಾಯ ಮಾಡಿಕೊಂಡಿದ್ದರು. ಹೀಗಾಗಿ ಜಮೀನು ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಮೃತ ಮಹಿಳೆಯ ದೂರದ ಸಂಬಂಧಿಯಿಂದಲೇ ಈ ಕೃತ್ಯದ ಆರೋಪ ಮಾಡಲಾಗಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್​ಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೊಲೆ ಮಾಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!