Sunday, May 19, 2024
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ..!

- Advertisement -G L Acharya panikkar
- Advertisement -

ಮಾರಕಾಸ್ತ್ರಗಳಿಂದ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ನಡೆದಿದೆ.

ಹತ್ಯೆಯಾದ ಯುವಕ ರೋಹನ್ ವಾಕಡೆ (22) ಎಂದು ಗುರುತಿಸಲಾಗಿದೆ.

ಹಳೆಯ ವಿಷಯಕ್ಕೆ ದುಷ್ಕರ್ಮಿಗಳು ಯುವಕನ ಜೊತೆ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಗಲಾಟೆ ತೆಗೆದುಕೊಂಡಿದ್ದಾರೆ. ಬಳಿಕ ತಮ್ಮ ಬಳಿ ಇದ್ದಂತಹ ಮಾರಕಾಸ್ತ್ರಗಳಿಂದ ಬರ್ಬರವಾಗಿ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಬಳಿಕ ಘಟನಾ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!