Thursday, May 2, 2024
spot_imgspot_img
spot_imgspot_img

ಜೇಬಿನಲ್ಲಿದ್ದ ಹೊಸ ಮೊಬೈಲ್​ ಏಕಾಏಕಿ ಬ್ಲಾಸ್ಟ್; ಯುವಕನಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಮೊಬೈಲ್ ಬ್ಲಾಸ್ಟ್ ಆಗಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ.

ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​ ಪನಿಯ ಮೊಬೈಲ್ ಖರೀದಿಸಿದ್ದರು. ಯುವಕ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್​ ಬ್ಲಾಸ್ಟ್ ಆಗಿದೆ.

ಈ ಘಟನೆ ಮೊಬೈಲ್​ ಶೋ ರೂಂ ಗಮನಕ್ಕೆ ಬರುತ್ತಿದ್ದಂತೆ ಮೆಡಿಕಲ್ ವೆಚ್ಚದ ಜೊತೆಗೆ ಮೊಬೈಲ್ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ.

ಇತ್ತ ಸರ್ಜರಿಗೆ ಬರೋಬ್ಬರಿ 4 ಲಕ್ಷ ರೂ. ಖರ್ಚು ಆಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದರಿಂದ ಪೂರ್ಣ ಪ್ರಮಾಣದ ಬಿಲ್ ಭರಿಸುವಂತೆ ಗಾಯಾಳು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಮಸ್ಯೆ ಹೇಳಿಕೊಳ್ಳಲು ಮೊಬೈಲ್ ಸೆಂಟರ್​ಗೆ ಹೋದರೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪ ಕೇಳಿಬಂದಿದೆ.

ವೈಟ್ ಫೀಲ್ಡ್​ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ಈಗ ಮೊಬೈಲ್ ಬ್ಲಾಸ್ಟ್​ನಿಂದ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ.. ಕೆಲಸ ಮಾಡದೆ ವಿಶ್ರಾಂತಿ ಪಡೆದರೆ ಹಣ ಯಾರು ಕೊಡುತ್ತಾರೆ ಎಂಬಂತಹ ಪ್ರಶ್ನೆ ಎದುರಾಗಿದೆ. ಈ ಹಿನ್ನಲೆ ಕಂಪನಿಯವರೇ ಸಂಪೂರ್ಣ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿ ವಕೀಲರ ಮೊರೆ ಹೋಗಲು ಯುವಕ ಮುಂದಾಗಿದ್ದಾನೆ.

- Advertisement -

Related news

error: Content is protected !!