Saturday, June 28, 2025
spot_imgspot_img
spot_imgspot_img

ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ವಿನೋದ್(24) ಎಂದು ಗುರುತಿಸಲಾಗಿದೆ.

ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು.

ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು. ಇನ್ನೇನು ಪರಸ್ಪರ ಪ್ರೀತಿ ಮಾಡಿದ್ದ ಜೋಡಿ ಹಕ್ಕಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನ ನೊಂದ ವಿನೋದ್ ಫೆಬ್ರವರಿ 2 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ನೇಣು ಹಾಕಿಕೊಂಡಿದ್ದ ವಿನೋದ್ ರಕ್ಷಿಸಿ ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ವಿನೋದ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!